ಡಾ. ವರ್ಗೀಸ್ ಕುರಿಯನ್
ಸಾಮಾನ್ಯ ಅಧ್ಯಯನ-3/ ಆರ್ಥಿಕತೆ
ಇದೀಗ ಸುದ್ದಿಯಲ್ಲಿದೆ:
-
ಪ್ರತಿ ವರ್ಷ ನವೆಂಬರ್ 26 ರಂದು ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನಾಚರಣೆಯನ್ನು ಸ್ಮರಿಸಲಾಗುತ್ತದೆ.
ಡಾ.ವರ್ಗೀಸ್ ಕುರಿಯನ್ (1921-2012) ಅವರ ಬಗ್ಗೆ:
- ಶ್ವೇತಕ್ರಾಂತಿಯ ಪಿತಾಮಹ:- ಇವರು ಭಾರತದ ಶ್ವೇತಕ್ರಾಂತಿಯ ಮುಖ್ಯ ರೂವಾರಿಯಾಗಿದ್ದು, ಇವರನ್ನು “ಶ್ವೇತಕ್ರಾಂತಿಯ ಪಿತಾಮಹ” ಎಂದು ಗೌರವಿಸಲಾಗುತ್ತದೆ.
- ಆಪರೇಷನ್ ಫ್ಲಡ್:- ಕೇರಳದ ಕೋಝಿಕ್ಕೋಡ್ನಲ್ಲಿ ಜನಿಸಿದ ಇವರು , 1970 ರಲ್ಲಿ ‘ಆಪರೇಷನ್ ಫ್ಲಡ್’ ನ ನೇತೃತ್ವ ವಹಿಸಿದರು. ಇದರ ಯಶಸ್ಸಿನಿಂದಾಗಿ ಹಾಲಿನ ಕೊರತೆ ಎದುರಿಸುತ್ತಿದ್ದ ಭಾರತವು ವಿಶ್ವದ ಅತಿದೊಡ್ಡ ಹಾಲು ಉತ್ಪಾದಕ ದೇಶವಾಗಿ ಮಾರ್ಪಟ್ಟಿತು.
- ಆನಂದ್ ಸಹಕಾರಿ ಮಾದರಿ:- ಡಾ. ವರ್ಗೀಸ್ ಕುರಿಯನ್ ಅವರು ಅಮುಲ್ ಮೂಲಕ ಯಶಸ್ವಿಯಾದ ‘ಆನಂದ್ ಸಹಕಾರಿ ಮಾದರಿ’ಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮಾದರಿಯು ದೇಶಾದ್ಯಂತ ಡೈರಿ ಕ್ಷೇತ್ರದ ಅಭಿವೃದ್ಧಿಗೆ ಸಮರ್ಥವಾದ ನೀಲನಕ್ಷೆಯಾಗಿ ಹೊರಹೊಮ್ಮಿತು.
- ಸಂಸ್ಥೆಗಳ ಸ್ಥಾಪನೆ:– ಇವರ ಸಕ್ರಿಯ ಶ್ರಮದಿಂದಾಗಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ಮತ್ತು ‘ಆನಂದ್’ನಲ್ಲಿರುವ ಗ್ರಾಮೀಣ ನಿರ್ವಹಣಾ ಸಂಸ್ಥೆಯಂತಹ ಪ್ರಮುಖ ಸಂಸ್ಥೆಗಳು ಅಸ್ತಿತ್ವಕ್ಕೆ ಬಂದವು.
- ಖಾದ್ಯ ತೈಲ ಉದ್ಯಮ:- 1979 ರಲ್ಲಿ ‘ಧಾರಾ’ ಬ್ರ್ಯಾಂಡ್ ಅನ್ನು ಪ್ರಾರಂಭಿಸುವ ಮೂಲಕ ಡಾ. ಕುರಿಯನ್ ಅವರು ಖಾದ್ಯ ತೈಲ ಉದ್ಯಮದಲ್ಲೂ ಕ್ರಾಂತಿಕಾರಿ ಬದಲಾವಣೆ ತಂದರು.
- ಪ್ರಮುಖ ಪ್ರಶಸ್ತಿಗಳು: ಪದ್ಮವಿಭೂಷಣ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಮತ್ತು ವಿಶ್ವ ಆಹಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.







ನಿಮ್ಮದೊಂದು ಉತ್ತರ